ಪಂತ್ ನಗರ್ ವಿಮಾನನಿಲ್ದಾಣವು ಕಾರ್ಬೆಟ್ ರಾಷ್ಟ್ರೀಯ ಉದ್ಯಾನವನದಿಂದ 50 ಕಿ.ಮೀ ದೂರದಲ್ಲಿದ್ದು, ಇಲ್ಲಿಗೆ ಸಮೀಪದ ವಿಮಾನ ನಿಲ್ದಾಣವಾಗಿ ಕಾರ್ಯ ನಿರ್ವಹಿಸುತ್ತದೆ. ಪ್ರವಾಸಿಗರು ಇಲ್ಲಿಂದ ಕಾರುಗಳನ್ನು ಬಾಡಿಗೆಗೆ ಪಡೆದು ಕಾರ್ಬೆಟ್ ರಾಷ್ಟ್ರೀಯ ಉದ್ಯಾನವನಕ್ಕೆ ತಲುಪಬಹುದು (ದರವು ಒಂದು ಟ್ರಿಪ್‍ಗೆ 1000 ರೂಪಾಯಿಯಾಗುತ್ತದೆ). ಡೆಹ್ರಾಡೂನಿನ ಜಾಲಿ ಗ್ರಾಂಟ್ ವಿಮಾನ ನಿಲ್ದಾಣವು ಈ ರಾಷ್ಟ್ರೀಯ ಉದ್ಯಾನವನದಿಂದ 130 ಕಿ.ಮೀ ದೂರದಲ್ಲಿ ನೆಲೆಗೊಂಡಿದ್ದು, ಇಲ್ಲಿಗೆ ಆಗಮಿಸುವವರಿಗೆ ಒಂದು ಬದಲಿ ವಿಮಾನ ನಿಲ್ದಾಣವಾಗಿ ಕಾರ್ಯ ನಿರ್ವಹಿಸುತ್ತದೆ. ಪ್ರವಾಸಿಗರು ಶಿಮ್ಲಾ ವಿಮಾನ ನಿಲ್ದಾಣದಿಂದ ಸಹ ಇಲ್ಲಿಗೆ ತಲುಪಬಹುದು. ಅದು ಇಲ್ಲಿಂದ 267 ಕಿ.ಮೀ ದೂರದಲ್ಲಿದೆ. ನವದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಇಲ್ಲಿಂದ 260 ಕಿ.ಮೀ ದೂರದಲ್ಲಿದ್ದು, ಇಲ್ಲಿಗೆ ಆಗಮಿಸುವ ವಿದೇಶಿ ಪ್ರವಾಸಿಗರಿಗೆ ವಿಮಾನ ಯಾನ ಸೌಲಭ್ಯವನ್ನು ಒದಗಿಸುತ್ತಿದೆ.