Search
  • Follow NativePlanet
Share
ಮುಖಪುಟ » ಸ್ಥಳಗಳು » ದಾಂಡೇಲಿ » ಆಕರ್ಷಣೆಗಳು » ದಾಂಡೇಲಿ ವನ್ಯಜೀವಿ ನಿಸರ್ಗಧಾಮ

ದಾಂಡೇಲಿ ವನ್ಯಜೀವಿ ನಿಸರ್ಗಧಾಮ, ದಾಂಡೇಲಿ

2

ದಾಂಡೇಲಿಗೆ ಭೇಟಿ ನೀಡುವ ಪ್ರವಾಸಿಗರಿಗೆ ಪ್ರಮುಖ ಆಕರ್ಷಣೆಯೆಂದರೆ ದಾಂಡೇಲಿ ವನ್ಯಜೀವಿ ನಿಸರ್ಗಧಾಮ. ಇಲ್ಲಿನ ನಿರ್ದಿಷ್ಟ ಪ್ರದೇಶವನ್ನು ದಾಂಡೇಲಿ ವನ್ಯಜೀವಿ ಧಾಮವೆಂದು 1956 ಮೇ 10 ರಂದು ಘೋಷಿಸಲಾಯಿತು. ನಂತರ 2006 ರಲ್ಲಿ ದಾಂಡೇಲಿ ಅಣಶಿ ಹುಲಿ ಸಂರಕ್ಷಿತ ಪ್ರದೇಶವೆಂದು ಘೋಷಿಸಲಾಯಿತು.ಇಲ್ಲಿನ ವನ್ಯಜೀವಿ ನಿಸರ್ಗಧಾಮದಲ್ಲಿ ಪ್ರವಾಸಿಗರು ರುದ್ರ ರಮಣೀಯ ಪ್ರಪಾತಗಳು, ಆಳವಾದ ನದಿ ನೀರಿನ ಹರಿವು ಮತ್ತು ಬೆಟ್ಟ ಗುಡ್ಡಗಳ ಸೌಂದರ್ಯವನ್ನು ಸವಿಯಬಹುದು.  ಸುಮಾರು 834.16 ಸ್ಕೇ.ಕಿ.ಮೀ. ವ್ಯಾಪ್ತಿ ಪ್ರದೇಶಗಳಲ್ಲಿ ಹರಡಿಕೊಂಡಿರುವ ಈ ಅರಣ್ಯವು 100 ರಿಂದ 970 ಮೀಟರಗಳಷ್ಟು ಎತ್ತರ ಹೊಂದಿದೆ. ಬಹಳಷ್ಟು ಅಳಿವನಂಚಿನಲ್ಲಿರುವ ಮತ್ತು ಅಪರೂಪದ ಪ್ರಾಣಿ ಪಕ್ಷಿಗಳ ಸಂಕುಲಗಳಿಗೆ ಈ ಅರಣ್ಯ ಪ್ರದೇಶವು ನೆಲೆ ನೀಡಿದೆ. ಕಪ್ಪು ಚಿರತೆ, ಜಿಂಕೆ, ಸಂಬಾರ, ಚಿಗರಿ, ಹಳದಿ ಕಾಲುಗಳ ನವಿಲು, ಹಾರ್ನಬಿಲ್, ಗೂಗೆ, ಕಾಡುಕೋಳಿ ಮುಂತಾದವುಗಳನ್ನು ಇಲ್ಲಿ ಕಾಣಬಹುದು.ಸುಮಾರು 200 ಕ್ಕೂ ಹೆಚ್ಚು ಬಗೆಯ ಪಕ್ಷಿಗಳ ಸಂಕುಲವನ್ನು ಈ ಅರಣ್ಯಧಾಮದಲ್ಲಿ ವೀಕ್ಷಿಸಬಹುದಾಗಿದೆ. ಈ ನಿಸರ್ಗಧಾಮದ ದಟ್ಟಾರಣ್ಯದಲ್ಲಿ ಚಾರಣ, ಸಾಹಸದ ಬೋಟಿಂಗ್ ಕ್ರೀಡೆಗಳಲ್ಲಿ ಪ್ರವಾಸಿಗರು ಭಾಗವಹಿಸಬಹುದು. ಈ ನಿಸರ್ಗಧಾಮಕ್ಕೆ ಅಕ್ಟೋಬರ್ ನಿಂದ ಜೂನ್ ತಿಂಗಳುಗಳಲ್ಲಿ ಭೇಟಿ ನೀಡಲು ಪ್ರವಾಸಿಗರಿಗೆ ಒಳ್ಳೆಯ ಸಮಯ.  ಇಡೀ ಅರಣ್ಯವನ್ನು ತೆರದ ಜೀಪಿನಲ್ಲಿ ಪ್ರವಾಸಿಗರು ನೋಡಬಹುದು. ಅರಣ್ಯದ ಮಾಹಿತಿಗಾಗಿ ಮತ್ತು ಸೂಕ್ತ ಮಾರ್ಗದರ್ಶನಕ್ಕಾಗಿ ಗೈಡ್ಸ್ ಗಳು ಇಲ್ಲಿದ್ದಾರೆ. ದಾಂಡೇಲಿ ವನ್ಯಜೀವಿ ನಿಸರ್ಗಧಾಮದ ಹತ್ತಿರವೇ ಇರುವ ಅಣಶಿ ರಾಷ್ಟ್ರೀಯ ಉದ್ಯಾನವನ ಪ್ರವಾಸಿಗರಿಗೆ ಮತ್ತೊಂದು ಆಕರ್ಷಣೆ.

One Way
Return
From (Departure City)
To (Destination City)
Depart On
10 Mar,Tue
Return On
11 Mar,Wed
Travellers
1 Traveller(s)

Add Passenger

  • Adults(12+ YEARS)
    1
  • Childrens(2-12 YEARS)
    0
  • Infants(0-2 YEARS)
    0
Cabin Class
Economy

Choose a class

  • Economy
  • Business Class
  • Premium Economy
Check In
10 Mar,Tue
Check Out
11 Mar,Wed
Guests and Rooms
1 Person, 1 Room
Room 1
  • Guests
    2
Pickup Location
Drop Location
Depart On
10 Mar,Tue
Return On
11 Mar,Wed