ಕಾಜಿರಂಗಾಗೆ ಸಮೀಪದ ವಿಮಾನ ನಿಲ್ದಾಣವು ಜೊರ್ಹಾಟ್‍ನಲ್ಲಿ ನೆಲೆಗೊಂಡಿದೆ. ಇದು ಇಲ್ಲಿಂದ 82 ಕಿ.ಮೀ ದೂರದಲ್ಲಿ ನೆಲೆಗೊಂಡಿದೆ. ಜೊರ್ಹಾಟ್ ವಿಮಾನ ನಿಲ್ದಾಣದಿಂದ ಪ್ರತಿನಿತ್ಯ ಗುವಾಹಟಿ ಮತ್ತು ಕೊಲ್ಕಟಾಗಳಿಗೆ ವಿಮಾನಗಳು ಹೋಗಿ ಬರುತ್ತಿರುತ್ತವೆ. ಗುವಹಾಟಿಯ ಲೋಕಪ್ರಿಯ ಗೋಪಿನಾಥ್ ಬೊರ್ಡೊಲೊಯ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಇಲ್ಲಿಗೆ ಸಮೀಪದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಿದ್ದು, ಇಲ್ಲಿಂದ 220 ಕಿ.ಮೀ ದೂರದಲ್ಲಿ ನೆಲೆಗೊಂಡಿದೆ.