ಮಂಡ್ಯ ಜಿಲ್ಲೆಯ ಕಾವೇರಿ ದಡದಲ್ಲಿರುವ ಮುತ್ತತ್ತಿ ಗ್ರಾಮವು ಪೌರಾಣಿಕ ಹಿನ್ನೆಲೆಯನ್ನು ಹೊಂದಿದೆ. ಬೆಂಗಳೂರಿನಿಂದ ರಸ್ತೆ ಮೂಲಕ 90 ನಿಮಿಷಗಳಲ್ಲಿ ಮುತ್ತತ್ತಿಯನ್ನು ತಲುಪಬಹುದು. ಮುತ್ತತ್ತಿ ಪೌರಾಣಿಕ ಮಹಾಕಾವ್ಯವಾದ ರಾಮಾಯಣದಲ್ಲಿ ಬರುವ ಒಂದು ಪ್ರದೇಶವಾಗಿದೆ ಎಂಬ ಪ್ರತೀತಿ ಇದೆ.ಇಲ್ಲಿ ಪ್ರಸಿದ್ಧವಾದ ಹನುಮಾನ ಮಂದಿರವಿದೆ ಅದಕ್ಕೆ ಸ್ಥಳೀಯರು ಹನುಮಂತರಾಯ ದೇವಸ್ಥಾನವೆಂದು ಕರೆಯುತ್ತಾರೆ.
ಕಾವೇರಿ ನದಿಯ ಹರಿವಿನ ಸುಂದರ ಪ್ರಕೃತಿ ಸೌಂದರ್ಯದೊಂದಿಗೆ ಕಂಗೊಳಿಸುವ ಚಿಕ್ಕ ಗ್ರಾಮವೇ ಮುತ್ತತ್ತಿ. ಕಾವೇರಿ ನದಿ ನೀರಿನಲ್ಲಿ ಭಾರಿ ಜನಪ್ರಿಯ ಸಾಹಸಕ್ರೀಡೆ ಕೋರಲ್ ರೈಡ್ ನ್ನು ಇಲ್ಲಿ ಪ್ರವಾಸಿಗರು ಆನಂದಿಸಬಹುದು. ಕಾವೇರಿ ವನ್ಯಜೀವಿ ಧಾಮ ಮತ್ತು ದಟ್ಟ ಅರಣ್ಯಗಳಿಂದ ಸುತ್ತುವರಿದಿರುವ ಮುತ್ತತ್ತಿ ಗ್ರಾಮದ ಪ್ರಕೃತಿ ಸೌಂದರ್ಯ ಮನ ಸೆಳೆಯುತ್ತದೆ. ರಮಣೀಯ ಕಣಿವೆ, ರಭಸದಿಂದ ಹರಿಯುವ ನೀರಿನ ಸೆಳವುಳ್ಳ ಸಣ್ಣ ಹಳ್ಳಗಳು ಇಲ್ಲಿವೆ. ಹಲವಾರು ಬಗೆಯ ಪ್ರಾಣಿ ಪಕ್ಷಿಗಳು ಈ ಅರಣ್ಯದಲ್ಲಿ ನೆಲೆಸಿವೆ.
ಒಂದರ ಮೇಲೊಂದರಂತೆ ಆಯ್ಕೆಗಳು
ಹುಲಿ, ಚಿರತೆ, ಕರಡಿ, ಕಾಡೆಮ್ಮೆ, ಕಾಡುಕೋಣ, ಕಾಡುಹಂಡಿ, ವಿವಿಧ ತಳಿಯ ಅಳಿಲು, ಜಿಂಕೆ, ಸಾಂಬಾರ್ ಮುಂತಾದ ಪ್ರಾಣಿಗಳು ಈ ಕಾಡಿನಲ್ಲಿ ನೆಲೆಸಿವೆ.ಮತ್ತೊಂದು ಪ್ರವಾಸಿ ತಾಣವಾಗಿರುವ ಭೀಮೇಶ್ವರಿ ಬಳಿ ಇರುವ ಮುತ್ತತ್ತಿ ಸುಂದರ ಪ್ರಾಕೃತಿಕ ಸೌಂದರ್ಯದೊಂದಿಗೆ ಚಾರಣಪ್ರಿಯರಿಗೆ ಸಂತಸ ಮೂಡಿಸುತ್ತದೆ. ಅದಕ್ಕೆಂದೇ ಅತೀ ಹೆಚ್ಚಿನ ಪ್ರಮಾಣದ ಚಾರಣಪ್ರಿಯರು ಇಲ್ಲಿಗೆ ಬರುತ್ತಾರೆ.ಅರಣ್ಯ ಇಲಾಖೆಯ ಅನುಮತಿಯೊಂದಿಗೆ ಈ ಅರಣ್ಯದಲ್ಲಿ ಪ್ರವಾಸಿಗರು ಚಾರಣ ಕೈಗೊಳ್ಳಬಹುದು.
ಇಲ್ಲಿರುವ ಸೊಲಿಗೆರೆ ಬೆಟ್ಟ ಸಮುದ್ರ ಮಟ್ಟದಿಂದ 1125 ಮೀ. ನಷ್ಟು ಎತ್ತರದಲ್ಲಿರುವ ಸೊಲಿಗೆರೆ ಬೆಟ್ಟದಿಂದ ಸುತ್ತಲಿನ ಪ್ರಕೃತಿ ಸೌಂದರ್ಯವನ್ನು ಕಣ್ತುಂಬಿಕೊಳ್ಳಬಹುದು. ಇಲ್ಲಿಂದ ಚಾರಣ ಮಾಡುತ್ತ ನಿಸರ್ಗಧಾಮವನ್ನು ನೋಡುತ್ತ ಭೀಮೇಶ್ವರಿ ಮತ್ತು ಸಂಗಮ ತಲುಪಬಹುದು.
ಬೆಂಗಳೂರಿನ ಜನತೆಗೆ ಮುತ್ತತ್ತಿಯು ಅಚ್ಚುಮೆಚ್ಚಿನ ಪಿಕ್ ನಿಕ್ ತಾಣವಾಗಿದೆ. ಪ್ರವಾಸಿಗರು ಇಲ್ಲಿ ಪ್ರಕೃತಿ ಸೌಂದರ್ಯ, ಕಾವೇರಿ ನದಿ, ಅರಣ್ಯ ಹಾಗೂ ಚಾರಣದಂತಹ ಸಾಹಸಕ್ರೀಡೆಯನ್ನು ಆನಂದಿಸಬಹುದು.


Click it and Unblock the Notifications