Search
  • Follow NativePlanet
Share
» »ಸ್ವಾತಂತ್ರ್ಯ ದಿನೋತ್ಸವದ ಅಂಗವಾಗಿ ಬೆಂಗಳೂರಿನಲ್ಲಿ ಉಚಿತ ಬಸ್ಸು ಪ್ರಯಾಣ ಸೌಲಭ್ಬ - ಬಿಎಂಟಿಸಿ ಪ್ರಕಟಿಸಿದೆ

ಸ್ವಾತಂತ್ರ್ಯ ದಿನೋತ್ಸವದ ಅಂಗವಾಗಿ ಬೆಂಗಳೂರಿನಲ್ಲಿ ಉಚಿತ ಬಸ್ಸು ಪ್ರಯಾಣ ಸೌಲಭ್ಬ - ಬಿಎಂಟಿಸಿ ಪ್ರಕಟಿಸಿದೆ

ಸ್ವಾತಂತ್ರ್ಯ ದಿನೋತ್ಸವದ ಅಂಗವಾಗಿ ಬೆಂಗಳೂರಿನಲ್ಲಿ ಉಚಿತ ಬಸ್ಸು ಪ್ರಯಾಣ ಸೌಲಭ್ಯ ಬಿಎಂಟಿಸಿ ಹೇಗೆ ತನ್ನ 25 ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿದೆ ನೋಡೋಣ

ಬೆಂಗಳೂರು

bmtc-bus-4-1534139161-16602120891-1660294955.jpg

ಬಿಎಂಟಿಸಿ ಯ ಇಪ್ಪತ್ತೈದನೇ ವಾರ್ಷಿಕೋತ್ಸವ ಮತ್ತು ಭಾರತದ 75ನೇ ಸ್ವಾತಂತ್ರ್ಯ ದಿನೋತ್ಸವದ ಅಂಗವಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು (ಕೆಎಸ್ಆರ್ ಟಿ ಸಿ) ಆಗಸ್ಟ್ 10 ರಂದು ಎಲ್ಲಾ ವಯಸ್ಸಿನ ಜನರೂ ಸಾಮಾನ್ಯ ಬಿಎಂ ಟಿ ಸಿ ಬಸ್ಸಿನಲ್ಲಿ ಉಚಿತ ಪ್ರಯಾಣದ ವ್ಯವಸ್ಥೆಯನ್ನು ಹಾಗೂ 15 ಆಗಸ್ಟ್ 2022 ರಂದು ಉಚಿತ ಸವಾರಿ ಮಾಡಬಹುದು ಎಂದು ಘೋಷಿಸಿದ್ದಾರೆ.

ಬಿಎಂಟಿಸಿಯ ನಿಗಮದ ಅಧ್ಯಕ್ಷ ನಂದೀಶ್ ರೆಡ್ಡಿಯವರು ಗುರುವಾರ ನಡೆಸಿದ ಪತ್ರಿಕಾಗೋಷ್ಟಿಯಲ್ಲಿ ಮಾತಾಡಿ' ಆಗಸ್ಟ್ ಆಗಸ್ಟ್ 15ರ ಸೋಮವಾರ ಬೆಳಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಿಎಂಟಿಸಿಯ 300 ಹೊಸ ಎಲೆಕ್ಟ್ರಿಕ್ ವಾಹನಗಳ ಮೊದಲ ಸಂಚಾರಕ್ಕೆ ಹಸಿರು ನಿಶಾನೆ ತೋರಿಸಲಿದ್ದಾರೆ. ಹಾಗೂ ಅಂದು ಎಲ್ಲಾ ವಯೋಮಾನದವರೂ ಸಾಮಾನ್ಯ ಬಿಎಂಟಿಸಿ ಬಸ್ಸಿನಲ್ಲಿ ಉಚಿತ ಪ್ರಯಾಣ ಮಾಡಬಹುದೆಂದು ಘೋಷಿಸಿದ್ದಾರೆ.

ಬಿಎಂಟಿಸಿ ಯ 25ನೇ ವಾರ್ಷಿಕೋತ್ಸವ ಹಾಗೂ ಭಾರತ ಸ್ವಾತಂತ್ರ್ಯ ದಿನೋತ್ಸವದ ಅಂಗವಾಗಿ ಪ್ರಯಾಣಿಕರಿಗೆ ಉಚಿತ ಬಸ್ ಪ್ರಯಾಣದ ವ್ಯವಸ್ಥೆ ಕಲ್ಪಿಸಲು ಪ್ರಸ್ತಾವನೆಗೆ ಸರಕಾರ ಒಪ್ಪಿಗೆ ನೀಡಿದೆ. ಇದಕ್ಕಾಗಿ ಕರ್ನಾಟಕ ಸರಕಾರವು ಸುಮಾರು 3 ಕೋಟಿಗಳ ನಷ್ಟವನ್ನು ಭರಿಸಲು ಸಿದ್ದವಾಗಿದೆ.

bmtc-free-bus -for-independence day

ಬೆಂಗಳೂರಿನಲ್ಲಿ ಬಿಎಂಟಿಸಿಯ ಸಂಭ್ರಮಾಚರಣೆಗಳು

ಭಾರತದ ಸ್ವಾತಂತ್ರ್ಯ ಹೋರಾಟಗಾರರು ನೀಡಿದ ಕೊಡುಗೆಗಳು, ಕಳೆದ 25 ವರ್ಷಗಳಲ್ಲಿ ಬಿಎಂಟಿಸಿಯ ವಿಕಸನ, ಅದರ ಸಾಂಸ್ಕೃತಿಕ ಪರಂಪರೆ ಮತ್ತು ಕಳೆದ 25 ವರ್ಷಗಳಲ್ಲಿ ಕೊಡುಗೆ ನೀಡಿದವರನ್ನು ಸ್ಮರಿಸುವಂತಹ ವಿವಿಧ ಅಂಶಗಳನ್ನು ಈ ಅಂಗವಾಗಿ ಆಯೋಜಿಸಲಾಗಿದೆ ಎಂದು ಬಿಎಂಟಿಸಿ ನಿಗಮದ ಅಧ್ಯಕ್ಷ ನಂದೀಶ್ ರೆಡ್ಡಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X