Search
  • Follow NativePlanet
Share
» »ವಿಮಾನದಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಇನ್ಮುಂದೆ ಮಾಸ್ಕ್ ಕಡ್ಡಾಯವಲ್ಲ

ವಿಮಾನದಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಇನ್ಮುಂದೆ ಮಾಸ್ಕ್ ಕಡ್ಡಾಯವಲ್ಲ

ವಿಮಾನ ಪ್ರಯಾಣ ಮಾಡುವ ಸಮಯದಲ್ಲಿ ಇನ್ಮುಂದೆ ಮಾಸ್ಕ್ ಕಡ್ಡಾಯವಲ್ಲ ಎಂದು ನಾಗರಿಕ ವಿಮಾನಯಾನ ಸಚಿವಾಲಯ ಆದೇಶ ಹೊರಡಿಸಿದೆ. ಕೊರೊನಾ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿರುವ ಹಿನ್ನೆಲೆಯಲ್ಲಿ ಈ ಸೂಚನೆಯನ್ನು ನೀಡಲಾಗಿದೆ.

Face Masks No Longer Mandatory In Flights Says Civil Aviation Ministry

ಕೋವಿಡ್ ಸಾಂಕ್ರಾಮಿಕ ಬಂದಾಗಿನಿಂದ ಈವರೆಗೂ ವಿಮಾನದಲ್ಲಿ ಪ್ರಯಾಣ ಬೆಳೆಸುವ ಪ್ರಯಾಣಿಕಲು ಫೇಸ್ ಮಾಸ್ಕ್ ಅನ್ನು ಕಡ್ಡಾಯವಾಗಿ ಧರಿಸಬೇಕಿರುತ್ತ. ಆದರೆ ಈ ಈಗ ಪರಿಸ್ಥಿತಿಯನ್ನು ಗಮನಿಸಿಕೊಂಡು ಈ ಆದೇಶವನ್ನು ಹಿಂಪಡೆಯಲಾಗಿದೆ.

ಭಾರತದ ನಾಗರಿಕ ವಿಮಾನಯಾನ ಸಚಿವಾಲಯವು ಪರಿಷ್ಕೃತ COVID ಪ್ರಯಾಣ ಮಾರ್ಗಸೂಚಿಗಳನ್ನು ಹೊರಡಿಸಿದೆ. ಮಾರ್ಗಸೂಚಿಗಳ ಪ್ರಕಾರ "ವಿಮಾನ ಪ್ರಯಾಣದ ಸಮಯದಲ್ಲಿ ಮಾಸ್ಕ್ ಅಥವಾ ಫೇಸ್ ಕವರ್‌ಗಳನ್ನು ಕಡ್ಡಾಯವಾಗಿ ಬಳಸುವ ಅವಶ್ಯಕತೆಯ ಕುರಿತು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದೊಂದಿಗೆ ಸಮಾಲೋಚಿಸಿ ಪರಿಶೀಲಿಸಲಾಗಿದೆ" ಎಂದು ನಾಗರಿಕ ವಿಮಾನಯಾನ ಸಚಿವಾಲಯ ಹೊರಡಿಸಿದ ಆದೇಶದಲ್ಲಿ ಹೇಳಿದೆ. ಈ ಕುರಿತು ವಿಮಾನಯಾನ ಸಂಸ್ಥೆಗಳಿಗೆ ಸಚಿವಾಲಯ ಮಾಹಿತಿ ನೀಡಿದೆ. ಅಲ್ಲದೆ ವಿಮಾನದಲ್ಲಿ ಪ್ರಯಾಣಿಸುವಾಗ ಫೇಸ್ ಮಾಸ್ಕ್ ಧರಿಸದಿದ್ದಕ್ಕಾಗಿ ಯಾವುದೇ ದಂಡವನ್ನು ವಿಧಿಸಲಾಗುವುದಿಲ್ಲ ಎಂದು ಖಚಿತಪಡಿಸಿದೆ.

ವಿಮಾನಯಾನ ಸಂಸ್ಥೆಗಳಿಗೆ ನೀಡಿದ ಸೂಚನೆಯಲ್ಲಿ COVID-19 ನಿರ್ವಹಣೆಗೆ ಸರ್ಕಾರದ ನೀತಿಗೆ ಅನುಗುಣವಾಗಿ ಇತ್ತೀಚಿನ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಸಚಿವಾಲಯ ತಿಳಿಸಿದೆ. ಇನ್ನುಮುಂದೆ ವಿಮಾನದಲ್ಲಿನ ಪ್ರಕಟಣೆಗಳು COVID-19 ನಿಂದ ಉಂಟಾಗುವ ಸಮಸ್ಯೆಗಳನ್ನು ಗಮನದಲ್ಲಿಟ್ಟುಕೊಂಡು ಎಲ್ಲಾ ಪ್ರಯಾಣಿಕರು ಮೇಲಾಗಿ ಮಾಸ್ಕ್/ಫೇಸ್ ಕವರ್‌ಗಳನ್ನು ಬಳಸಬೇಕು ಎಂದು ಮಾತ್ರ ಉಲ್ಲೇಖಿಸಬಹುದು ಎಂದು ಸಚಿವಾಲಯ ತಿಳಿಸಿದೆ.

ವಿಮಾನಯಾನ ಉದ್ಯಮದ ಅಧಿಕಾರಿಯೊಬ್ಬರು ಸಚಿವಾಲಯದ ನಿರ್ಧಾರವು ತಕ್ಷಣವೇ ಜಾರಿಗೆ ಬರಲಿದೆ ಮತ್ತು ವಾಹಕಗಳು ಸಿಬ್ಬಂದಿಗೆ ಅದೇ ರೀತಿ ಸಂವಹನ ನಡೆಸುತ್ತವೆ ಎಂದು ಹೇಳಿದ್ದಾರೆ.

ವಿಮಾನದಲ್ಲಿನ ಪ್ರಕಟಣೆಗಳ ಭಾಗವಾಗಿ ದಂಡ/ದಂಡದ ಕ್ರಮದ ಯಾವುದೇ ನಿರ್ದಿಷ್ಟ ಉಲ್ಲೇಖವನ್ನು ಘೋಷಿಸಬೇಕಾಗಿಲ್ಲ ಎಂದು ವರದಿಗಳು ಹೇಳುತ್ತವೆ. ವಿಮಾನ ಪ್ರಯಾಣದ ಸಮಯದಲ್ಲಿ ಮಾಸ್ಕ್ ಅಥವಾ ಫೇಸ್ ಕವರ್‌ಗಳ ಕಡ್ಡಾಯ ಬಳಕೆಯ ಅಗತ್ಯವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದೊಂದಿಗೆ ಸಮಾಲೋಚಿಸಿ ಪರಿಶೀಲಿಸಲಾಗಿದೆ.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X