Search
  • Follow NativePlanet
Share
» »6 Tech Cities In Karnataka : ರಾಜ್ಯದ 6 ನಗರಗಳನ್ನು ಹೈಟೆಕ್ ಸಿಟಿಗಳಾಗಿ ನಿರ್ಮಾಣ : ಸಿಎಂ ಬಸವರಾಜ ಬೊಮ್ಮಾಯಿ

6 Tech Cities In Karnataka : ರಾಜ್ಯದ 6 ನಗರಗಳನ್ನು ಹೈಟೆಕ್ ಸಿಟಿಗಳಾಗಿ ನಿರ್ಮಾಣ : ಸಿಎಂ ಬಸವರಾಜ ಬೊಮ್ಮಾಯಿ

ರಾಜ್ಯದಲ್ಲಿ ಹೊಸದಾಗಿ 6 ನಗರಗಳನ್ನು ಹೈಟೆಕ್ ಸಿಟಿಗಳಾಗಿ ನಿರ್ಮಿಸುವುದಾಗಿ ಸರ್ಕಾರ ತೀರ್ಮಾನಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಬುಧವಾರ ನಗರದ ಅರಮನೆ ಮೈದಾನದಲ್ಲಿ ಆರಂಭವಾದ ಮೂರು ದಿನಗಳ 25ನೇ ವರ್ಷದ ಬೆಂಗಳೂರು ತಂತ್ರಜ್ಞಾನ ಸಮಾವೇಶದ ಉದ್ಘಾಟನಾ ಕಾರ್ಯಕ್ರಮದಲ್ಲಿ ಈ ಬಗ್ಗೆ ಅವರು ಘೋಷಿಸಿದರು.

Karnataka Govt Planing To Build 6 Tech Cities Including Bengaluru CM Says

ಬೆಂಗಳೂರಿಗೆ ಪ್ರತಿದಿನ 5000ಕ್ಕೂ ಹೆಚ್ಚು ಇಂಜನೀಯರ್ ಗಳು ಬಂದು ಹೋಗುತ್ತಾರೆ. ಬೆಂಗಳೂರಿನಲ್ಲಿ ಸುಮಾರು 400 ಆರ್ ಆಂಡ್ ಡಿ ಸೆಂಟರ್ ಇವೆ. ಬಿಯಾಂಡ್ ಬೆಂಗಳೂರು ಸಾಕಾರಗೊಳಿಸಲು ಸರ್ಕಾರ ಎಲ್ಲ ರೀತಿಯ ಸಹಕಾರ ನೀಡುತ್ತೇವೆ. ಮೈಸೂರು, ಮಂಗಳೂರು, ಹುಬ್ಬಳ್ಳಿ ಧಾರವಾಡ ಕಡೆಗಳಲ್ಲಿ ಐಟಿ ಉದ್ಯಮಕ್ಕೆ ಆದ್ಯತೆ ನೀಡುತ್ತೇವೆ. ಮುಂದಿನ 10 ವರ್ಷದಲ್ಲಿ ನಗರೀಕರಣ ಹೆಚ್ಚಳವಾಗಲಿದೆ. ಭಾರತದಲ್ಲಿ ಶೇ 40% ರಷ್ಟು ನಗರೀಕರಣವಾಗಲಿದೆ. ಹೀಗಾಗಿ ಐಟಿ ಬಿಟಿ ಕಂಪನಿಗಳು ಸರಳ ನಗರೀಕರಣ ಜೀವನ ನಿರ್ವಹಣೆಗೆ ತಂತ್ರಜ್ಞಾನ ಅಭಿವೃದ್ದಿ ಪಡಿಸಲು ಕರೆ ನೀಡಿದರು.

ಈ ನಿಟ್ಟಿನಲ್ಲಿ ಕರ್ನಾಟಕ ರಾಜ್ಯದಲ್ಲಿ ಶೀಘ್ರದಲ್ಲೇ ಒಟ್ಟು ಆರು ಹೊಸ ನಗರಗಳನ್ನು ನಿರ್ಮಿಸಲಾಗುವುದು. ಕಲಬುರ್ಗಿ, ಹುಬ್ಬಳ್ಳಿ ಧಾರವಾಡ, ಮೈಸೂರು, ಮಂಗಳೂರು ಸುತ್ತ ಹೊಸ ನಗರಗಳು ಬರಲಿವೆ. ಈ ಹೊಸ ನಗರಗಳು ಕರ್ನಾಟಕದ ಆರ್ಥಿಕತೆ ಮತ್ತು ಉತ್ಪಾದಕತೆ ಹೆಚ್ಚಿಸಲು ನೆರವಾಗಲಿವೆ. ಈ ಆರು ಹೊಸ ನಗರಗಳಲ್ಲಿ ಬೆಂಗಳೂರಿನ ಬಳಿ ಒಂದನ್ನು ನಿರ್ಮಿಸಲಾಗುತ್ತಿದೆ. ಇದು ಆದಷ್ಟು ಕೆಐಎಗೆ ಹತ್ತಿರವಿರಲಿದೆ ಎಂದರು.

ಬೆಂಗಳೂರಿನಲ್ಲಿ ಎಲ್ಲವೂ ಸಾಧ್ಯವಿದೆ. ಆರೋಗ್ಯ ಕ್ಷೇತ್ರದಲ್ಲಿಯೂ ತಂತ್ರಜ್ಞಾನ ಬಳಕೆ ಮಾಡುವ ಮೂಲಕ ಆರೋಗ್ಯಯುತ ಸಮಾಜ ನಿರ್ಮಾಣ ಮಾಡಬೇಕು. ದೇಶದಲ್ಲಿ ಒಂದು ವರ್ಷದಲ್ಲಿ ಜಲ ಜೀವನ್ ಮಿಷನ್ ಅಡಿಯಲ್ಲಿ 7 ಕೋಟಿ ಮನೆಗಳಿಗೆ ಶುದ್ದ ಕುಡಿಯುವ ನೀರು ಒದಗಿಸಲಾಗುತ್ತಿದೆ ಎಂದು ಬೊಮ್ಮಾಯಿ ತಿಳಿಸಿದರು. ಸ್ಟಾರ್ಟ್ಅಪ್ ಗಳನ್ನು ಪ್ರೋತ್ಸಾಹಿಸಲು ಅನೇಕ ಕಾರ್ಯಕ್ರಮಗಳಿದ್ದು, ಸರ್ಕಾರದಿಂದ ಇನ್ನಷ್ಟು ಕಾರ್ಯಕ್ರಮ ರೂಪಿಸಲಾಗುವುದು. ಪ್ರಧಾನಿಗಳು ಬಿಐಎಎಲ್ ನ 2 ನೇ ಟರ್ಮಿನಲ್ ಉದ್ಘಾಟನೆ ಮಾಡಿದ್ದಾರೆ. ಜಗತ್ತಿನಲ್ಲಿಯೇ ಅತ್ಯಂತ ಸುಂದರವಾದ ಟರ್ಮಿನಲ್ ಇದಾಗಿದೆ. ರಾಜ್ಯದಲ್ಲಿ ಈ ಹಿಂದೆ ಬಿಜೆಪಿ ಪಕ್ಷದಿಂದ ನಡೆದ ಸಮಾರಂಭದಲ್ಲಿ ಮೈಸೂರು ಸುತ್ತಮುತ್ತ ವಿವಿಧ ಉದ್ದೇಶಗಳಿಗೆ ಬಂಡವಾಳ ಹೂಡಿಕೆದಾರರು ಬಂಡವಾಳ ಹೂಡಲು ಆಸಕ್ತಿ ತೋರಿದ್ದಾರೆ. ಇದರಿಂದ ಸಾವಿರಾರು ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಅವರು ಹೇಳಿದರು.

More News

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+