ಸೂರ್ಯ ನಾರಾಯಣ ದೇವಾಲಯವು ಸುಮಾರು 15ನೆಯ ಶತಮಾನದಲ್ಲಿ ನಿರ್ಮಿಸಲಾಗಿದೆ. ಈ ದೇವಾಲಯವು ತನ್ನದೇ ಆದ ವಿಶಿಷ್ಟ ವಾಸ್ತುಶೈಲಿಯನ್ನು ಹೊಂದಿದ್ದು, ಅದಕ್ಕಾಗಿ ಬೃಹತ್ ಸಂಖ್ಯೆಯಲ್ಲಿ ಪ್ರವಾಸಿಗರನ್ನು ತನ್ನತ್ತ ಆಕರ್ಷಿಸುತ್ತಿದೆ. ಪ್ರವಾಸಿಗರು ಇಲ್ಲಿ ಛಾವಣಿಯ ಮೂಲೆಯಲ್ಲಿ ಸೂರ್ಯನ ಅಸಂಖ್ಯಾತ ಚಿತ್ರಿಕೆಗಳನ್ನು ಕಾಣಬಹುದಾಗಿದೆ. ಅವುಗಳಲ್ಲಿ ಸೂರ್ಯನು ಏಳು ಕುದುರೆಗಳ ಮೇಲೆ ಸವಾರಿ ಮಾಡುತ್ತಿರುವ ಚಿತ್ರವು ಎಲ್ಲರ ಗಮನ ಸೆಳೆಯುತ್ತಿದೆ.


Click it and Unblock the Notifications