ನಾಂದೇಡ್ ರಾಷ್ಟ್ರೀಯ ವಿಮಾನನಿಲ್ದಾಣವು ಪರ್ಭಾನಿಗೆ ಸಮೀಪದ ವಿಮಾನ ನಿಲ್ದಾಣವಾಗಿದ್ದು,ಇಲ್ಲಿಂದ 60 ಕಿ.ಮೀ ದೂರದಲ್ಲಿದೆ. ವಿಮಾನಗಳು ಇಲ್ಲಿಂದ ವಾರಕ್ಕೆ ನಾಲ್ಕು ದಿನಗಳ ಕಾಲ ನಿಯಮಿತವಾಗಿ ಹಾರಾಟ ನಡೆಸುತ್ತವೆ. ಈ ವಿಮಾನ ನಿಲ್ದಾಣದಿಂದ ಪರ್ಭಾನಿಗೆ ಟ್ಯಾಕ್ಸಿಗಳು ಲಭ್ಯವಿದೆ. ಮುಂಬೈನ ಛತ್ರಪತಿ ಶಿವಾಜಿ ವಿಮಾನ ನಿಲ್ದಾಣವು ಇಲ್ಲಿಗೆ ಸಮೀಪದ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವಾಗಿದ್ದು, ಇದು ಭಾರತದ ಒಳಗಿನ ಮತ್ತು ಹೊರಗಿನ ಹಲವು ನಗರಗಳೊಂದಿಗೆ ವಿಮಾನ ಸಂಪರ್ಕವನ್ನು ಹೊಂದಿದೆ.