ಶಿವಗಂಗೆಗೆ ಹತ್ತಿರದ ವಿಮಾನ ನಿಲ್ದಾಣ ಬೆಂಗಳೂರು ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣವಾಗಿದ್ದು ,ಅದು ಇಲ್ಲಿಂದ 60 ಕಿ.ಮೀ ದೂರದಲ್ಲಿದೆ. ಇದು ದೇಶಿಯ ಮತ್ತು ವಿದೇಶಿ ಪ್ರವಾಸಿಗರಿಗೆ ಅನುಕೂಲಕರವಾಗುವಂತಹ ವಿಮಾನ ಸಂಪರ್ಕ ಸೇವೆಯನ್ನು ಹೊಂದಿದೆ.ಭಾರತದ ಪ್ರಮುಖ ನಗರಗಳಾದ ಮುಂಬೈ, ದೆಹಲಿ, ಕೊಲ್ಕತ್ತಾ ಮತ್ತು ಚೆನ್ನೈ ಜೊತೆಗೆ ಯೂರೋಪ್, ಏಶಿಯಾ,ಅಮೆರಿಕಾ ಮತ್ತು ಮಧ್ಯ ಪ್ರಾಚ್ಯ ದೇಶಗಳೊಂದಿಗೆ ಈ ನಿಲ್ದಾಣ ಉತ್ತಮ ವಿಮಾನಯಾನ ಸಂಪರ್ಕ ಹೊಂದಿದೆ.