Search
  • Follow NativePlanet
Share
» »ಲಾಲ್‌ಬಾಗ್ ಪುಷ್ಪೋತ್ಸವ: ಈ ಬಾರಿಯ ವಿಶೇಷತೆಗಳೇನು ಗೊತ್ತೇ?

ಲಾಲ್‌ಬಾಗ್ ಪುಷ್ಪೋತ್ಸವ: ಈ ಬಾರಿಯ ವಿಶೇಷತೆಗಳೇನು ಗೊತ್ತೇ?

ದೇಶದ 77ನೇ ಸ್ವಾತಂತ್ರ್ಯ ವರ್ಷದ ಅಂಗವಾಗಿ ಲಾಲ್‌ಬಾಗ್‌ನ ಗಾಜಿನಮನೆಯಲ್ಲಿ ಫ್ಲವರ್‌ಶೋ ಆಯೋಜಿಸಲಾಗಿದೆ. ಫ್ಲವರ್‌ಶೋಗೆ ಆಗಸ್ಟ್‌ 8 ರಂದು ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು. ಈ ವರ್ಷ ಸಂವಿಧಾನ ಶಿಲ್ಪಿ ಡಾ ಬಿ.ಆರ್. ಅಂಬೇಡ್ಕರ್ ಅವರ ಕಾನ್ಸೆಪ್ಟ್ ನಲ್ಲಿ ಫ್ಲವರ್ ಶೋ ಮೂಡಿಬಂದಿದೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಮೊಮ್ಮಗ ಯಶವಂತ್ ಅಂಬೇಡ್ಕರ್ ಅವರು ಕೂಡ ಭಾಗಿಯಾಗಿದ್ದರು. ಆಗಸ್ಟ್ 19ರವರೆಗೂ ಫ್ಲವರ್ ಶೋ ಇರಲಿದ್ದು, ಏನೆಲ್ಲಾ ವಿಶೇಷತೆಗಳಿವೆ ನೋಡೋಣ ಬನ್ನಿ...

ಪ್ಲವರ್ ಶೋ ನ ಪ್ರಮುಖ ಆಕರ್ಷಣೆಗಳು

ಸಂಸತ್, ಭೀಮ ಸ್ಮಾರಕ, ಅಂಬೇಡ್ಕರ್ ಹುಟ್ಟಿದ ಜಾಗ, ಬೆಳೆದು ಬಂದಂತಹ ಹಾದಿ, ರಾಜಗೃಹ, ಬೌದ್ದ ಧರ್ಮದ ಸ್ವೀಕಾರ ಸಂದರ್ಭ ಪ್ಲವರ್ ಶೋ ನ ಪ್ರಮುಖ ಆಕರ್ಷಣೆಗಳಾಗಿವೆ. ಫ್ಲವರ್ ಶೋ ಅಷ್ಟೆ ಅಲ್ಲದೇ ಅಂಡರ್ ಫಿಶ್ ಆಕ್ವೇರಿಯಮ್ ಸಹ ಮಾಡಲಾಗಿದ್ದು, ಮಕ್ಕಳಿಂದ ದೊಡ್ಡವರವರೆಗೂ ಆಕರ್ಷಿಸುತ್ತಿದೆ.‌

Lalbagh Flower Show 2024 August In Bengaluru Theme Admission Fees

35 ಲಕ್ಷ ಹೂಗಳ ಬಳಕೆ

ಫ್ಲವರ್ ಶೋನಲ್ಲಿ 200 ಕ್ಕೂ ಹೆಚ್ಚು ಬಗೆಯ ಹೂಗಳು ಒಂದೇ ಸ್ಥಳದಲ್ಲಿ ಜನರನ್ನ ಮೋಡಿ ಮಾಡುತ್ತಿದ್ದು, ಒಟ್ಟು 35 ಲಕ್ಷ ಹೂಗಳನ್ನ ಫ್ಲವರ್ ಶೋಗೆ ಬಳಕೆ ಮಾಡಿಕೊಳ್ಳಲಾಗಿದೆ. ಆಂಧ್ರ, ಊಟಿ, ತಮಿಳುನಾಡು ಸೇರಿದಂತೆ ಬೇರೆ ಬೇರೆ ಭಾಗಗಳಿಂದ ಹೂಗಳು ಬಂದಿದ್ದು, ಆಂಥೋರಿಯಂ, ಲಿಲ್ಲಿ, ಆರ್ಕಿಡ್, ಜರ್‌ಬೆರಾ, ಸೇವಂತಿಗೆ, ನಂದಿ ಗಿರಿಧಾಮದ ಇಂಪೇಷನ್ಸ್ ಹೂಗಳು, ಅಗಪಾಂಥಸ್, ಸುಗಂಧ ರಾಜ ಸೇರಿದಂತೆ ಸುಮಾರು 30-32 ಲಕ್ಷ ಹೂಗಳನ್ನು ಪ್ರದರ್ಶನದಲ್ಲಿ ಬಳಕೆ ಮಾಡಿಕೊಳ್ಳಲಾಗಿದೆ. ಇನ್ನು 8 ಲಕ್ಷ ಹೂಗಳು ಹೊರ ರಾಜ್ಯಗಳಿಂದ ಬಂದಿವೆ.

ಟಿಕೆಟ್ ವ್ಯವಸ್ಥೆ

ಈ 12 ದಿನಗಳ ಪ್ರದರ್ಶನಕ್ಕೆ 2.80 ಕೋಟಿ ರೂ. ವ್ಯಯಿಸಲಾಗುತ್ತಿದೆ. ಪ್ರದರ್ಶನಕ್ಕೆ ಬರುವ ಜನರ ಅನುಕೂಲಕ್ಕಾಗಿ ಆನ್‌ಲೈನ್ ಟಿಕೆಟ್ ವ್ಯವಸ್ಥೆ ಮಾಡಲಾಗಿದೆ. ವಯಸ್ಕರಿಗೆ 100 ರೂ. ಮಕ್ಕಳಿಗೆ 30 ರೂ.ಪ್ರವೇಶ ಶುಲ್ಕ ನಿಗದಿಪಡಿಸಿದ್ದು, ಗುರುತಿನ ಚೀಟಿಯೊಂದಿಗೆ ಸಮವಸ್ತ್ರದಲ್ಲಿ ಬರುವ ಶಾಲಾ ವಿದ್ಯಾರ್ಥಿಗಳಿಗೆ ಪ್ರವೇಶ ಉಚಿತವಾಗಿರುತ್ತದೆ. ಪ್ಲಾಸ್ಟಿಕ್ ಬಳಕೆ ಸಂಪೂರ್ಣ ನಿಷೇಧಿಸಲಾಗಿದೆ.

ಪ್ರವಾಸಿಗರ ದಂಡು

ಫ್ಲವರ್‌ ಶೋ ನೋಡಲು ಬೆಂಗಳೂರು ಅಷ್ಟೇ ಅಲ್ಲದೇ ಬೇರೆ ಜಿಲ್ಲೆ ಹಾಗೂ ರಾಜ್ಯಗಳಿಂದ ಪ್ರವಾಸಿಗರು ಬರುತ್ತಿದ್ದಾರೆ. ವಿಕೆಂಡ್‌ನಲ್ಲಿ ಜನಜಂಗುಳಿ ಉಂಟಾಗುತ್ತಿರುವುದರಿಂದ ಸುರಕ್ಷತೆ ಕಾಯ್ದುಕೊಳ್ಳಿ.

Lalbagh Flower Show 2024 August In Bengaluru Theme Admission Fees1

ಪಾರ್ಕಿಂಗ್ ಸ್ಥಳಗಳು

ಫ್ಲವರ್ ಶೋ ಹಿನ್ನೆಲೆಯಲ್ಲಿ ಜನರಿಗೆ ವಾಹನ ನಿಲುಗಡೆಗೆ 4 ಕಡೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ.

1. ಮರಿಗೌಡ ರಸ್ತೆಯ ಆಲ್ ಅಮೀನ್ ಕಾಲೇಜ್ ಆವರಣದಲ್ಲಿ ಬೈಕ್ ಪಾರ್ಕಿಂಗ್

2. ಶಾಂತಿನಗರ ಬಿಎಂಟಿಸಿ ಬಸ್ ನಿಲ್ದಾಣದ ಮೇಲೆ ನಾಲ್ಕು ಚಕ್ರದ ವಾಹನ ನಿಲುಗಡೆ ವ್ಯವಸ್ಥೆ

3.ಮರಿಗೌಡ ರಸ್ತೆಯ ಹಾಪ್ ಕಾಮ್ಸ್ನಲ್ಲಿ ಬೈಕ್ ಹಾಗೂ ಕಾರು ನಿಲುಗಡೆ

4. ಜೆ.ಸಿ. ರಸ್ತೆ ಕಾರ್ಪೋರೇಷನ್ ಪಾರ್ಕಿಂಗ್ ಸ್ಥಳದಲ್ಲಿ ಬೈಕ್ ಹಾಗೂ ಕಾರು ನಿಲುಗಡೆ ವ್ಯವಸ್ಥೆ ಮಾಡಲಾಗಿದೆ.

lalbagh2

ನಮ್ಮ ಮೆಟ್ರೋ ಟ್ವೀಟ್‌

ಫ್ಲವರ್ ಶೋ ವೀಕ್ಷಿಸಲು ತೆರಳುವವರಿಗೆ ಬೆಂಗಳೂರು ಮೆಟ್ರೋ (Metro) ರೈಲು ನಿಗಮ (BMRCL) ಆ. 15, 17 ಮತ್ತು 18ರಂದು ಮೆಟ್ರೋದಲ್ಲಿ ರಿಟರ್ನ್ ಜರ್ನಿ ಪೇಪರ್ ಟಿಕೆಟ್ ವ್ಯವಸ್ಥೆ ಮಾಡಿದೆ. ಪ್ರಯಾಣಿಕರ ಅನುಕೂಲ ದೃಷ್ಟಿಯಿಂದ ಮೆಟ್ರೋದಲ್ಲಿ ರಿಟರ್ನ್ ಜರ್ನಿ ಪೇಪರ್ ಟಿಕೆಟ್ ವ್ಯವಸ್ಥೆ ಮಾಡಲಾಗಿದ್ದು, ಬೆಳಗ್ಗೆ 10 ಗಂಟೆಯಿಂದ ರಾತ್ರಿ 10 ಗಂಟೆವರೆಗೆ ಪೇಪರ್ ಟಿಕೆಟ್ ಲಭ್ಯವಾಗಲಿದೆ.

ಲಾಲ್ಬಾಗ್ ಮೆಟ್ರೋ ನಿಲ್ದಾಣದಿಂದ ಯಾವುದೇ ನಿಲ್ದಾಣಕ್ಕೆ 30 ರೂ. ಪೇಪರ್ ಟಿಕೆಟ್ ಪಡೆದು ಪ್ರಯಾಣಿಸಬಹುದು. ಎಎಫ್ಸಿ ಗೇಟ್ ಬಳಸಿ ಯಾವುದೇ ನಿಲ್ದಾಣಕ್ಕೆ ಪ್ರಯಾಣ ಬೆಳೆಸಬಹುದಾಗಿದೆ.

ರಿಟರ್ನ್ ಜರ್ನಿ ಪೇಪರ್ ಟಿಕೆಟ್‌ಗಳು ಖರೀದಿಸಿದ ದಿನದಂದು ಲಾಲ್‌ಬಾಗ್ ಮೆಟ್ರೋ ನಿಲ್ದಾಣದಿಂದ ಯಾವುದೇ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣಿಸಬಹುದಾಗಿದೆ. ಸಾರ್ವಜನಿಕರು ಟೋಕನ್, ಕಾರ್ಡ್. ಕ್ಯೂಆರ್ ಟಿಕೆಟ್‌ಗಳ ಮೂಲಕ ಲಾಲ್‌ಬಾಗ್ ನಿಲ್ದಾಣಕ್ಕೆ ಪ್ರಯಾಣಿಸಬಹುದು ಹಾಗೂ ಲಾಲ್‌ಬಾಗ್ ಮೆಟ್ರೋ ನಿಲ್ದಾಣದಿಂದ ಹಿಂತಿರುಗಲು ಟೋಕನ್ ಗಳ ಬದಲಿಗೆ ಪೇಪರ್ ಟಿಕೆಟ್, ಕಾರ್ಡ್, ಮತ್ತು ಕ್ಯೂಆರ್ ಟಿಕೆಟ್ ಮೂಲಕ ಮಾತ್ರ ಪ್ರಯಾಣಿಸಬಹುದು.

More News

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+