Tap to Read ➤

ಕಡಲೆಕಾಯಿ ಪರಿಷೆ 2022

ಬೆಂಗಳೂರಿನ ಐತಿಹಾಸಿಕ ಕಡಲೆಕಾಯಿ ಪರಿಷೆ ಬಗ್ಗೆ ತಿಳಿಯಿರಿ.
ಬೆಂಗಳೂರಿನ ಐತಿಹಾಸಿಕ ಕಡಲೆಕಾಯಿ ಪರಿಷೆ ಪ್ರತಿ ವರ್ಷ ಕಾರ್ತಿಕ ಮಾಸದ ಕೊನೆಯ ಸೋಮವಾರದಂದು ನಡೆಯುತ್ತದೆ.
ಕಡಲೆಕಾಯಿ ಪರಿಷೆ ಸಾಮಾನ್ಯವಾಗಿ ನವೆಂಬರ್ ಕೊನೆಯ ಅಥವಾ ಡಿಸೆಂಬರ್ ಮೊದಲ ವಾರದಲ್ಲಿ ನಡೆಯುತ್ತದೆ.
ಬಸವನಗುಡಿಯ ಪ್ರಸಿದ್ದ ದೊಡ್ಡಗಣಪತಿ ದೇವಾಲಯದ ಆವರಣದಲ್ಲಿ ಈ ಕಡಲೆಕಾಯಿ ಪರಿಷೆ ನಡೆಯುತ್ತದೆ.
1537ರಲ್ಲಿ ಬೆಂಗಳೂರಿನ ನಿರ್ಮಾತೃ ಕೆಂಪೇಗೌಡರು ಬಸವನಗುಡಿ ಬೆಟ್ಟದ ಮೇಲೆ ದಕ್ಷಿಣ ಶೈಲಿಯಲ್ಲಿ ದೊಡ್ಡ ಬಸವ ದೇವಾಲಯವನ್ನು ಸ್ಥಾಪಿಸಿದರು.
1537 ರಿಂದ ಕಡಲೆಕಾಯಿ ಪರಿಷೆ ಆರಂಭಗೊಂಡಿದೆ.
ಇದು ರೈತರ ಆರಾಧನೆಯಾಗಿದ್ದು, ದೊಡ್ಡಬಸವಣ್ಣನಿಗೆ ಈ ರೀತಿಯಾಗಿ ಕೃತಜ್ಞತೆ ಸಲ್ಲಿಸುತ್ತಾರೆ.
ಪ್ರಸಕ್ತ ವರ್ಷ ನ.21 ರಿಂದ ನ.23ರ ವರೆಗೆ ಅಂದರೆ ಮೂರು ದಿನಗಳ ಕಾಲ ಕಡಲೆಕಾಯಿ ಪರಿಷೆ ನಡೆಯಲಿದೆ.
ಪ್ರತಿವರ್ಷ ಜನರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಪರಿಷೆಯಲ್ಲಿ ಪಾಲ್ಗೊಳ್ಳುತ್ತಾರೆ.
Things To Buy In Mysore